ಬೆಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ.
ಇವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆಯ ಕಾನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಪಿ.ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಅವರುಗಳು ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ.
ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…