ನವದೆಹಲಿ: ಐಪಿಎಲ್-2025ರ ಆವೃತ್ತಿಯ ಡೆಲ್ಲಿ ಕ್ಯಾಪಿಟಲ್ಸ್ ಟೀಂಗೆ ಅಕ್ಷರ್ ಪಟೇಲ್ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಟೀಂ ಇಂಡಿಯಾ ತಂಡವೂ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಲು ಅಕ್ಷರ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಇದರ ಬೆನ್ನಲ್ಲೇ ಐಪಿಎಲ್-2025ರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗ ಐಪಿಎಲ್ ಪ್ರವೇಶಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಕ್ಷರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ನನಗೆ ಅತ್ಯಂತ ಗೌರವದ ಸಂಗತಿಯಾಗಿದೆ. ಇಂದು ನಾನೊಬ್ಬ ಕ್ರಿಕೆಟ್‌ನಾಗಿ ಬೆಳೆದಿದ್ದೇನೆ, ಈ ತಂಡವನ್ನು ಮುನ್ನಡೆಸಲು ನಾನು ಸಿದ್ಧನಾಗಿದ್ದೇನೆಂಬ ಆತ್ಮ ವಿಶ್ವಾಸವನ್ನು ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ 2019ರಿಂದ ಆಡುತ್ತಿದ್ದು, 2024 ರ ಮೆಗಾ ಹರಾಜಿಗೆ ಮೊದಲು 16.50 ಕೋಟಿ ರೂ.ಗೆ ತಂಡಕ್ಕೆ ಹಿಂದಿರುಗಿದ್ದರು. ಅವರಿಗೆ ನಾಯಕತ್ವದ ಅನುಭವವಿಲ್ಲದಿದ್ದರೂ, 2025ರ ಜನವರಿಯಲ್ಲಿ ಟೀಂ ಇಂಡಿಯಾ ತಂಡದ ಟಿ-20 ಉಪನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು. ಅಲ್ಲದೇ ಸೈಯದ್ ಮುಷ್ತಾಕ್ ಅಲಿ ಹಾಗೂ ವಿಜಯ್ ಹಜಾರೆ ಟ್ರೋಫಿಗಳು ಸೇರಿದಂತೆ 23 ಪಂದ್ಯಗಳಲ್ಲಿ ಗುಜರಾತ್ ಅನ್ನು ಮುನ್ನಡೆಸಿದ್ದಾರೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…