ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದೆ.
ತಂಡದ ಸಹ ಆಟಗಾರರೊಂದಿಗೆ ಮಾತನಾಡಿರುವ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ. ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್‌ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.
ಆರ್‌ಸಿಬಿ ಕಳೆದ ಸೀಸನ್‌ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ. ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…