ರಾಜ್ಯ

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು.

ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.‌

ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು.ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

26 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

48 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

57 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

1 hour ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

1 hour ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

2 hours ago