ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ ತಟ್ಟಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಹಾಗೂ ಆಮದು ವ್ಯತ್ಯಯದಿಂದಾಗಿ ಕಳೆದ ಕೇವಲ ಒಂದು ವಾರದಲ್ಲಿ ಬೆಂಗಳೂರಿನಲ್ಲಿ ಅಡುಗೆ ಎಣ್ಣೆಯ ದರ ಏರಿಕೆಯಾಗಿದೆ ಎನ್ನಲಾಗಿದೆ. ಪ್ರತಿಲೀಟರ್ ಅಡುಗೆ ಎಣ್ಣೆ ದರ 168 ರೂಪಾಯಿಗೆ ಎಂದು ಹೇಳಲಾಗುತ್ತಿದೆ.
ಕಳೆದ ಐದಾರು ದಿನಗಳಲ್ಲಿ ಪ್ರತಿ ಲೀಟರ್ ಅಡುಗೆ ಎಣ್ಣೆಯ ಮೇಲೆ ಅಂದಾಜು 8 ರೂಪಾಯಿಗಳನ್ನು ಏರಿಕಯಾಗಿದೆ. ಯುದ್ಧದ ತೀವ್ರತೆ ಹೆಚ್ಚಾದಲ್ಲಿ ಮುಂದಿನ ದಿನಗಳಲ್ಲಿ ಈ ಬೆಲೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಎಚ್ಚರಿಸಿದ್ದಾರೆ.
ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ಧ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆಯ ಜೊತೆಗೆ ಆಮದು ಮಾಡಿಕೊಳ್ಳುವ ಇತರೆ ದಿನಸಿ ಪದಾರ್ಥಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…