Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಇಸ್ರೇಲ್-ಇರಾನ್‌ ಸಂಘರ್ಷದ ಎಫೆಕ್ಟ್:‌ ಬೆಂಗಳೂರಿನಲ್ಲಿಂದು 21 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್‌ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.

ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್‌ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ದಿಢೀರ್‌ ರದ್ದುಗೊಳಿಸಲಾಗಿದೆ.

ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಬೆಂಗಳೂರಿನಿಂದ ಅರಬ್‌ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳು ಹಾಗೂ ಅಲ್ಲಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 10 ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ.

ಮಾರ್ಚ್.‌1ರಿಂದ ಮಾರ್ಚ್.‌9ರ ನಡುವೆ ಈಗಾಗಲೇ 200ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಇದರಲ್ಲಿ ಮಾರ್ಚ್.‌2ರಂದು 72 ಮತ್ತು ಮಾರ್ಚ್.‌4ರಂದು 34 ವಿಮಾನಗಳು ಸೇರಿವೆ.

 

 

Tags:
error: Content is protected !!