ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋದ ಮತ್ತಷ್ಟು ಹೆಚ್ಚಾಗಿದ್ದು, ಇದರ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನ ವಿಮಾನಯಾನದ ಮೇಲೆ ಬೀರಿದೆ.
ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅರಬ್ ರಾಷ್ಟ್ರಗಳಿಗೆ ಸಂಚರಿಸಬೇಕಿದ್ದ ಮತ್ತು ಅಲ್ಲಿಂದ ಬರಬೇಕಿದ್ದ ಒಟ್ಟು 21 ವಿಮಾನಗಳ ಹಾರಾಟವನ್ನು ದಿಢೀರ್ ರದ್ದುಗೊಳಿಸಲಾಗಿದೆ.
ಪ್ರಯಾಣಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರಿನಿಂದ ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ 11 ವಿಮಾನಗಳು ಹಾಗೂ ಅಲ್ಲಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ 10 ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ.
ಮಾರ್ಚ್.1ರಿಂದ ಮಾರ್ಚ್.9ರ ನಡುವೆ ಈಗಾಗಲೇ 200ಕ್ಕೂ ಹೆಚ್ಚು ಅಂತರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಇದರಲ್ಲಿ ಮಾರ್ಚ್.2ರಂದು 72 ಮತ್ತು ಮಾರ್ಚ್.4ರಂದು 34 ವಿಮಾನಗಳು ಸೇರಿವೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…