Mysore
20
overcast clouds
Light
Dark

ಬೆಂಗಳೂರಲ್ಲಿ ನಾಯಿ ಮಾಂಸ ಮಾರಾಟ ಆಗ್ತಿದ್ಯಾ? ನಾನ್‌ವೆಜ್‌ ಪ್ರಿಯರು ಈ ಸುದ್ದಿ ಓದಲೇಬೇಕು…..

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್‌ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗೆ ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಶುಕ್ರವಾರ(ಜು.26) ನಗರಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ಮಾಡಿ ಮಾಂಸದ ಬಾಕ್ಸ್‌ಗಳನ್ನು ತಡೆಹಿಡಿದಿದ್ದಾರೆ.

ಪುನೀತ್‌ ಕೆರೆಹಳ್ಳಿ ತಂಡದ ಕಾರ್ಯರ್ತರು ಈ ಕಾರ್ಯಚರಣೆ ನಡೆಸಿದ್ದಾರೆ. ಮಟನ್‌ ಮಾಂಸವನ್ನು ಎತ್ತಿ ನೋಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಮಾಂಸಗಳನ್ನು ಪರಿಶೀಲನೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ವ್ಯಾಪಾರಿ ಅಬ್ದುಲ್‌ ರಜಾಕ್‌ ಮತ್ತು ಪುನೀತ್‌ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.

ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್‌ ರಜಾಕ್‌ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್‌, ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಅವರ ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್‌ಗಳು ಪಾರ್ಸಲ್‌ ಬಂದಿವೆ. ಅದರಲ್ಲಿ ಒಟ್ಟು 4.500 ಕೆ.ಜಿ ಮಾಂಸವಿದೆ ಎಂದು ತಿಳಿದುಬಂದಿದೆ.

ಸದ್ಯ ಘಟನಾ ಸ್ಥಳಕ್ಕೆ ಬಿಬಿಎಂಪಿ ಆಹಾರ ಗುಣಮಟ್ಟ ಅಧಿಕಾರಿಗಳು ದೌಡಾಯಿಸಿದ್ದು, ಮಾಂಸದ ವಿವಿಧ ಅಂಗಾಂಗಳನ್ನು ಸ್ಯಾಂಪಲ್‌ಗಳಿಗೆ ಕಳುಹಿಸಿದ್ದಾರೆ. ಇನ್ನೂ ಎರಡು ಕಡೆಯ ತಲ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.