ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿಗೆ ಪ್ರತಿನಿತ್ಯ ವಿವಿಧ ರಾಜ್ಯಗಳಿಂದ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಶುಕ್ರವಾರ(ಜು.26) ನಗರಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ಮಾಡಿ ಮಾಂಸದ ಬಾಕ್ಸ್‌ಗಳನ್ನು ತಡೆಹಿಡಿದಿದ್ದಾರೆ.
ಪುನೀತ್ ಕೆರೆಹಳ್ಳಿ ತಂಡದ ಕಾರ್ಯರ್ತರು ಈ ಕಾರ್ಯಚರಣೆ ನಡೆಸಿದ್ದಾರೆ. ಮಟನ್ ಮಾಂಸವನ್ನು ಎತ್ತಿ ನೋಡಿ, ಇದರಲ್ಲಿ ನಾಯಿ ಮಾಂಸ ಇದೆ ಎಂದು ಆರೋಪಿಸಿದ್ದಾರೆ. ಮಾಂಸಗಳನ್ನು ಪರಿಶೀಲನೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಮಾಂಸ ಸಾಗಾಟ ವ್ಯಾಪಾರಿ ಅಬ್ದುಲ್ ರಜಾಕ್ ಮತ್ತು ಪುನೀತ್ ಕೆರೆಹಳ್ಳಿ ಮಧ್ಯೆ ವಾಗ್ವಾದ ನಡೆದಿದೆ.
ಮಾಂಸ ಸಾಗಾಟ ಮಾಡುತ್ತಿರೋ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಕಾರ್ಯಕರ್ತರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವೆಲ್ಲವೂ ಕುರಿ ಮಾಂಸದ ಬಾಕ್ಸ್, ನಾವು ಬೇರೆ ಮಾಂಸವನ್ನು ಸಾಗಾಟ ಮಾಡುತ್ತಿಲ್ಲ. ಅವರ ಆರೋಪಗಳೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಜೈಪುರ ರೈಲಿನಲ್ಲಿ ಬೆಂಗಳೂರಿಗೆ ಒಟ್ಟು 90 ಮಾಂಸದ ಬಾಕ್ಸ್‌ಗಳು ಪಾರ್ಸಲ್ ಬಂದಿವೆ. ಅದರಲ್ಲಿ ಒಟ್ಟು 4.500 ಕೆ.ಜಿ ಮಾಂಸವಿದೆ ಎಂದು ತಿಳಿದುಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಬಿಬಿಎಂಪಿ ಆಹಾರ ಗುಣಮಟ್ಟ ಅಧಿಕಾರಿಗಳು ದೌಡಾಯಿಸಿದ್ದು, ಮಾಂಸದ ವಿವಿಧ ಅಂಗಾಂಗಳನ್ನು ಸ್ಯಾಂಪಲ್‌ಗಳಿಗೆ ಕಳುಹಿಸಿದ್ದಾರೆ. ಇನ್ನೂ ಎರಡು ಕಡೆಯ ತಲ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…