ರಾಜ್ಯ

ಊಟಕ್ಕೆ ಸೇರುವುದೇ ಅಪರಾಧವೇ..? : ಸಿಎಂ ಕಿಡಿ

ಬೆಂಗಳೂರು : ಸಚಿವರು ಊಟಕ್ಕೆ ಸೇರುವುದೇ ಅಪರಾಧವೇ? ಅದರ ಬಗ್ಗೆ ಪದೇಪದೇ ಏಕೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ವಿಧಾನಸೌಧದ ಮುಂಭಾಗ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರು ನಾವು ಪದೇ ಪದೇ ಊಟಕ್ಕೆ ಒಟ್ಟಾಗಿ ಸೇರುತ್ತಿರುತ್ತೇವೆ, ಅದರಲ್ಲಿ ತಪ್ಪೇನೆಂದು ಪ್ರಶ್ನಿಸಿದರು.

ಇದನ್ನೂ ಓದಿ:-RSS | ತಾಕತ್ತಿದ್ದರೆ ನನ್ನನ್ನು ನಿಷೇಧಿಸಿ ; ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಸಚಿವರು ಊಟಕ್ಕೆ ಸೇರಬಾರದು ಎಂಬಂತೆ ಬಿಜೆಪಿಯವರು ಹೇಳುತ್ತಿದ್ದಾರೆ. ಅದೇನು ಅಪರಾಧವೇ? ಈ ವಿಚಾರ ಪದೇಪದೇ ಚರ್ಚೆಯಾಗುತ್ತಿರುವುದೇಕೆ? ಎಂದು ತಿರುಗೇಟು ನೀಡಿದರು.

ಬಿಜೆಪಿಯವರ ನಿಲುವೇ ನನಗೆ ಅರ್ಥವಾಗುತ್ತಿಲ್ಲ ಎಂದು ಸಿಡಿಮಿಡಿ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಸಚಿವರ ಔತಣಕೂಟವನ್ನು ಬಲವಾಗಿ ಸಮರ್ಥಿಸಿಕೊಂಡರು.

ಶಾಲಾ, ಕಾಲೇಜು, ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ಆರ್‍ಎಸ್‍ಎಸ್‍ನ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದರು.

ಆಂದೋಲನ ಡೆಸ್ಕ್

Recent Posts

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

33 mins ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

4 hours ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

4 hours ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

4 hours ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

4 hours ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

4 hours ago