Mysore
15
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಪ್ರಿಯಾಂಕ ಖರ್ಗೆ ಪ್ರಶ್ನೆ

ಬೆಂಗಳೂರು : ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್‌ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಪ್ರಿಯಾಂಕ ಖರ್ಗೆ, ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್‌ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ಹೆಸರನ್ನ ಮೊದಲೇ ಬಾರಿಗೆ ಪ್ರಸ್ತಾಪಿಸಿದೆ ಅನ್ವರ್ ಮಣಿಪ್ಪಾಡಿಯವರು ಎಂದಿದ್ದಾರೆ.

ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದ ಮಣಪ್ಪಾಡಿಯವರು ಈಗ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಲು ಎಷ್ಟು ಆಫರ್ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ.

ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವೀಡಿಯೊಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ. ಬಿಜೆಪಿ ಪಕ್ಷ, ಅವರ ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು, ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ! ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಣಿಪ್ಪಾಡಿಯವರಿಗೆ ಈಗ ಏನಾಯಿತು? ಎಂದಿದ್ದಾರೆ.

Tags:
error: Content is protected !!