ಬೆಂಗಳೂರು : ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ರೂ. ಆಮಿಷ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧದ ಆರೋಪ ಸುಳ್ಳು ಎಂದು ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ ಖರ್ಗೆ, ವಿಜಯೇಂದ್ರ ಮೇಲಿನ ಆರೋಪ ಸುಳ್ಳು ಎನ್ನುತ್ತಿರುವ ಅನ್ವರ್ ಮಣಿಪ್ಪಾಡಿಯವರು ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ಹೆಸರನ್ನ ಮೊದಲೇ ಬಾರಿಗೆ ಪ್ರಸ್ತಾಪಿಸಿದೆ ಅನ್ವರ್ ಮಣಿಪ್ಪಾಡಿಯವರು ಎಂದಿದ್ದಾರೆ.
ವಕ್ಫ್ ವರದಿಯನ್ನು ಮುಚ್ಚಿಹಾಕಲು ವಿಜಯೇಂದ್ರ ಕೋಟಿ ಕೋಟಿ ಆಮಿಷ ಒಡ್ಡಿದ್ದಾರೆ ಎಂದು ಪ್ರತಿ ಮಾಧ್ಯಮಗಳಲ್ಲೂ ಘಂಟಾಘೋಷವಾಗಿ ಹೇಳಿದ್ದ ಮಣಪ್ಪಾಡಿಯವರು ಈಗ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರರ ರಕ್ಷಣೆಗಾಗಿ ಮಾತು ಬದಲಿಸಲು ಎಷ್ಟು ಆಫರ್ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕರ ಹೆಸರನ್ನು ಬಹಿರಂಗಪಡಿಸುವ ಬದಲು ಅವರು ವಿಜಯೇಂದ್ರ ಅವರ ಹೆಸರನ್ನು ಮಾತ್ರ ಏಕೆ ಹೇಳಿದರು ಮಾಣಿಪ್ಪಾಡಿಯವರ ವಕ್ಫ್ ವರದಿಯನ್ನು ಮುಚ್ಚಿಹಾಕುವ ಪ್ರಯತ್ನದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದರು. ಆ ಪತ್ರವನ್ನು ಈಗ ಬಹಿರಂಗಪಡಿಸಲಿ.
ಮಾಣಿಪ್ಪಾಡಿಯವರ ಮತ್ತು ಬಿಜೆಪಿ ಗೆಳೆಯರ ನೆನಪುಗಳನ್ನು ರಿಫ್ರೆಶ್ ಮಾಡಲು ದಯವಿಟ್ಟು ವೀಡಿಯೊಗಳು ಮತ್ತು ಪತ್ರಿಕಾ ಲೇಖನಗಳನ್ನು ಅತ್ಯಂತ ಗಮನ ಕೊಟ್ಟು ನೋಡಲಿ. ಬಿಜೆಪಿ ಪಕ್ಷ, ಅವರ ಮಾಜಿ ಮುಖ್ಯಮಂತ್ರಿಗಳ ಹಾಗೂ ಅವರ ಅಧ್ಯಕ್ಷರ ಮರ್ಯಾದೆ ಉಳಿಸಲು, ನಿನ್ನೆ ಇಡೀ ರಾತ್ರಿ ಮಾಣಿಪ್ಪಾಡಿಯವರ ಕೈ ಕಾಲು ಹಿಡಿದು ಗೋಳಾಡಿರಬಹುದೇ! ಸತ್ಯಕ್ಕಾಗಿ ಹಾಗೂ ಸಮುದಾಯಕ್ಕಾಗಿ ಹುತಾತ್ಮರಾಗಲು ಸಿದ್ಧನಿದ್ದೇನೆ ಎಂದಿದ್ದ ಮಣಿಪ್ಪಾಡಿಯವರಿಗೆ ಈಗ ಏನಾಯಿತು? ಎಂದಿದ್ದಾರೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…