ಬೆಳಗಾವಿ: ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್ ಇನ್ನೂ ಬಹಳ ದೂರವಿದೆ. ಆಗ ನೋಡೋಣ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆಯಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್. ಇದು ನಮ್ಮ ಮಟ್ಟದಲ್ಲಿ ಇಲ್ಲ. ಸಚಿವರ ಕಾರ್ಯವೈಖರಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ ಹೊಸ ಲೀಡರ್‌ಶಿಪ್ ಬೆಳೆಯುತ್ತದೆ ಎಂದು ಹೇಳಿದರು.





