ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ ಲಾಭವಾಗುತ್ತಿದ್ದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದೆ.
ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ? ಮಾಲ್ಡಿವ್ಸ್, ಅಪಘಾನಿಸ್ತಾನ್, ಭೂತಾನ್ ಸೇರಿದಂತೆ ವಿದೇಶಗಳಿಗೆ ಸಾವಿರಾರು ಕೋಟಿ ಹಣ ನೀಡಿದರೆ ದೇಶದ ಪ್ರಗತಿಗೆ ಮಾರಕವಲ್ಲವೇ? ಪ್ರಧಾನಿ ಓಡಾಟಕ್ಕೆ 8 ಸಾವಿರ ಕೋಟಿ ಕೊಟ್ಟು ವಿಮಾನ ಖರೀದಿಸಿದರೆ ಪ್ರಗತಿಗೆ ಮಾರಕವಲ್ಲವೇ? ಎಂದು ಕಿಡಿಕಾರಿದೆ.
ಅಂದಾಜು 5000 ಕೋಟಿ ವೆಚ್ಚದ ಉಚಿತ ಪ್ರಯಾಣದ ಯೋಜನೆಯ ಬಗ್ಗೆ ಇಷ್ಟು ಅಸಹನೆ ಹೊಂದಿರುವ ಮೋದಿಯವರ ಜನವಿರೋಧಿ ನಿಲುವು ಜನತೆಗೆ ಅರ್ಥವಾಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…