Mysore
25
broken clouds

Social Media

ಬುಧವಾರ, 09 ಜುಲೈ 2025
Light
Dark

ಸಿದ್ದರಾಮಯ್ಯನವರಿಗೆ ಇದು ಡಿಮೋಷನ್ನಾ? ಪ್ರಮೋಷನ್ನಾ?: ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ನೇಮಕ ಮಾಡಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಒಬಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸಿದ್ದರಾಮಯ್ಯನವರಿಗೆ ಇದು ಡಿಮೋಷನ್ನಾ? ಅಥವಾ ಪ್ರಮೋಷನ್ನಾ? ಇದಕ್ಕೆ ಸಿದ್ದರಾಮಯ್ಯನವರೇ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.

ಇನ್ನು ಅಧಿಕಾರ ಇಲ್ಲದ ಸಮಿತಿಗೆ ಸಿಎಂ ಸಿದ್ದರಾಮಯ್ಯರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕರ್ನಾಟಕ ರಾಜಕಾರಣದಲ್ಲಿ ಬದಲಾವಣೆಗೆ ಪ್ರಶ್ನೆಗಳಿಗೆ ಇದು ಪುಷ್ಠಿ ನೀಡುತ್ತಿದೆ. ಸಿಎಂ ಆಗಿದ್ದವರಿಗೆ ರಾಷ್ಟ್ರಮಟ್ಟದಲ್ಲಿ ಹುದ್ದೆ ಕೊಟ್ಟಿದ್ದಾರೆ. ಇದರ ಹಿಂದೆ ಬದಲಾವಣೆಯ ಸೂಚನೆಯಿದೆ ಎಂಬುದು ಸಾಬೀತಾಗಿದೆ. ಈ ಹಿಂದೆ ಹಲವು ಬಾರಿ ಇಂತಹ ಸನ್ನಿವೇಶಗಳು ನಡೆದಿವೆ. ಇದು ಸಿದ್ದರಾಮಯ್ಯ ಅವರಿಗೆ ಡಿಮೋಷನ್‌ ಎಂದು ಹೇಳಿದ್ದಾರೆ.

Tags:
error: Content is protected !!