Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯಲು ವೋಟ್‌ ಚೋರಿ ಕಾರಣವೇ?: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಾಗ ಬಾರದ ಅನುಮಾನ ಈಗ ಏಕೆ ಬಂದಿದೆ? ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಬರುವುದಿಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇರುವುದಿಲ್ಲ. ಬಿಜೆಪಿ ಗೆದ್ದಾಗ ಮಾತ್ರ ಮತಗಳ್ಳತನದ ಅನುಮಾನ ಏಕೆ ಬರುತ್ತದೆ? ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನು ಓದಿ: ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ

ಸಿದ್ದರಾಮಯ್ಯನವರೇ ನೀವು ರಾಜಕಾರಣವನ್ನು ರಾಜಕಾರಣವಾಗಿ ಎದುರಿಸಿ. ಓಡಿ ಹೋಗಬೇಡಿ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮತ್ತು ನಿಮ್ಮ ಪಕ್ಷದ್ದು ಹಿಟ್ ಅಂಡ್ ರನ್ ಕೇಸ್. ಬಿಹಾರದಲ್ಲಿ ಎನ್‍ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್‍ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಎನ್ನುತ್ತಾರೆ. ಸೋತರೆ ವೋಟ್ ಚೋರಿ ಎನ್ನುತ್ತಾರೆ. ರಾಹುಲ್ ಗಾಂಧಿ ಮತ್ತು ಟೀಂ. ಬರೀ ಹಿಟ್ ರನ್ ಮಾಡುವುದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.

ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರದ ಮೇಲಾಗುವ ಪರಿಣಾಮದ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದು ಮನವಿ ಮಾಡಿದರು.

Tags:
error: Content is protected !!