ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆದ್ದು ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಓಟ್ ಚೋರಿ ನಡೆಸಿದ್ದರೆ? ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದಾಗ ಬಾರದ ಅನುಮಾನ ಈಗ ಏಕೆ ಬಂದಿದೆ? ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಬರುವುದಿಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇರುವುದಿಲ್ಲ. ಬಿಜೆಪಿ ಗೆದ್ದಾಗ ಮಾತ್ರ ಮತಗಳ್ಳತನದ ಅನುಮಾನ ಏಕೆ ಬರುತ್ತದೆ? ಎಂದು ತರಾಟೆಗೆ ತೆಗೆದುಕೊಂಡರು.
ಇದನ್ನು ಓದಿ: ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ
ಸಿದ್ದರಾಮಯ್ಯನವರೇ ನೀವು ರಾಜಕಾರಣವನ್ನು ರಾಜಕಾರಣವಾಗಿ ಎದುರಿಸಿ. ಓಡಿ ಹೋಗಬೇಡಿ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಮತ್ತು ನಿಮ್ಮ ಪಕ್ಷದ್ದು ಹಿಟ್ ಅಂಡ್ ರನ್ ಕೇಸ್. ಬಿಹಾರದಲ್ಲಿ ಎನ್‍ಡಿಎಗೆ ಅದ್ಭುತ ಗೆಲುವು ಸಿಕ್ಕಿದೆ. ಕಾಂಗ್ರೆಸ್‍ಗೆ ಬಿಹಾರದ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಅವರ ಸರ್ಕಾರ ಗೆದ್ದಾಗ ಗೆಲುವು ಎನ್ನುತ್ತಾರೆ. ಸೋತರೆ ವೋಟ್ ಚೋರಿ ಎನ್ನುತ್ತಾರೆ. ರಾಹುಲ್ ಗಾಂಧಿ ಮತ್ತು ಟೀಂ. ಬರೀ ಹಿಟ್ ರನ್ ಮಾಡುವುದಷ್ಟೇ ಅವರ ಕೆಲಸ ಎಂದು ಹರಿಹಾಯ್ದರು.
ಬೆಂಗಳೂರು ಟನಲ್ ರಸ್ತೆ ಯೋಜನೆಗೆ ಆತುರ ಬೇಡ. ಸರಿಯಾದ ಡಿಪಿಆರ್ ಮಾಡಿ. ಪರಿಸರದ ಮೇಲಾಗುವ ಪರಿಣಾಮದ ವರದಿ ಆಗಿಲ್ಲ. ತರಾತುರಿಯಲ್ಲಿ ಯೋಜನೆ ಬೇಡ. ಹೊಸ ಡಿಪಿಆರ್ ಮಾಡಿ, ಪರಿಸರ ಉಳಿಸಿ. ಅಭಿವೃದ್ಧಿಗೆ ನಾವು ವಿರೋಧ ಇಲ್ಲ, ಆದರೆ ಪಾರ್ಕ್, ಸಾರ್ವಜನಿಕ ಸ್ಥಳಗಳನ್ನು ಉಳಿಸಿ ಎಂದು ಮನವಿ ಮಾಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…