Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕಾಡಾನೆ ದಾಳಿಗೆ ಮಹಿಳೆ ಸಾವು| ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷನೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಘೋಷಣೆ ಮಾಡಿದ್ದಾರೆ.

ವಿಧಾನ ಪರಿಷತ್‌ ಕಲಾಪದಲ್ಲಿ ಇಂದು(ಮಾರ್ಚ್‌.17) ಈ ಕುರಿತು ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪ್ರಸ್ತಾಪಿಸಿದಕ್ಕೆ ಉತ್ತರ ನೀಡಿದ ಅವರು, ಕಾಡಾನೆ ಮತ್ತು ಮಾನವ ಸಂಘರ್ಷ ನಿನ್ನೆ, ಇಂದಿನದಲ್ಲ. ಅದು ಅನೇಕ ವರ್ಷಗಳಿಂದ ನಡೆಯುತ್ತಿರು ಸಂಘರ್ಷವಾಗಿದೆ. ಹಾಸನದಲ್ಲಿಯೇ ಕೋವಿಡ್‌ ನಂತ ರ 4 ರಿಂದ 5 ಮಂದಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ನಾವು ಇದಕ್ಕೆ ಪರಿಹಾರ ನೀಡಬಹುದೇ ಹೊರತು, ಜೀವವನ್ನು ವಾಪಾಸ್‌ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನು ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಹಾಗಾಗಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:
error: Content is protected !!