ಬೆಂಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬಲಿಯಾದ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಇಂದು(ಮಾರ್ಚ್.17) ಈ ಕುರಿತು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಸ್ತಾಪಿಸಿದಕ್ಕೆ ಉತ್ತರ ನೀಡಿದ ಅವರು, ಕಾಡಾನೆ ಮತ್ತು ಮಾನವ ಸಂಘರ್ಷ ನಿನ್ನೆ, ಇಂದಿನದಲ್ಲ. ಅದು ಅನೇಕ ವರ್ಷಗಳಿಂದ ನಡೆಯುತ್ತಿರು ಸಂಘರ್ಷವಾಗಿದೆ. ಹಾಸನದಲ್ಲಿಯೇ ಕೋವಿಡ್ ನಂತ ರ 4 ರಿಂದ 5 ಮಂದಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ನಾವು ಇದಕ್ಕೆ ಪರಿಹಾರ ನೀಡಬಹುದೇ ಹೊರತು, ಜೀವವನ್ನು ವಾಪಾಸ್ ತರಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನು ಹಾಸನ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಹಾಗಾಗಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…