Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ವಿದ್ಯುತ್‌ ಸ್ಪರ್ಶಿಸಿ ಕಾಡಾನೆಗಳ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಈಶ್ವರ್‌ ಖಂಡ್ರೆ

Eshwara Khandre

ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ, ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂದು ಹೇಳಲಾಗಿದೆ.

ಇದನ್ನು ಓದಿ: ಹಲಗೂರು | ವಿದ್ಯುತ್‌ ಸ್ಪರ್ಶಕ್ಕೆ ಗಂಡಾನೆ ಸಾವು

ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಬೇಲಿಗೆ ವಿದ್ಯುತ್‌ ಸಂಪರ್ಕ ನೀಡಿ, ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತಿಯ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

Tags:
error: Content is protected !!