Eshwara Khandre
ಬೆಂಗಳೂರು: ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಇದೇ ಪ್ರದೇಶದಲ್ಲಿ ಆನೆಗಳು ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳದೇ, ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂದು ಹೇಳಲಾಗಿದೆ.
ಇದನ್ನು ಓದಿ: ಹಲಗೂರು | ವಿದ್ಯುತ್ ಸ್ಪರ್ಶಕ್ಕೆ ಗಂಡಾನೆ ಸಾವು
ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ, ಲೋಪವಿದ್ದಲ್ಲಿ ಶಿಸ್ತು ಕ್ರಮದ ಶಿಫಾರಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ, ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತಿಯ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…