Mysore
18
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಇಂದಿನ ರಾಜ್ಯಪಾಲರ ಭಾಷಣ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿ: ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣ ಯಶಸ್ವಿ ಸರ್ಕಾರದ ಯಶೋಗಾಥೆಯಾಗಿದೆ. ಆ ಭಾಷಣ ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಸ್ಪಷ್ಟವಾಗಿ ಸಾರಿದೆ ಎಂದರು.

ರಾಜ್ಯದಲ್ಲಿ ಗ್ಯಾರಂಟಿಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಿಂದ ಅಸಮಾನತೆ ತಗ್ಗಿದ್ದರೆ, ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ರಾಜ್ಯ ಮಾಡುವ ಸಲುವಾಗಿ ಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡುವ ಸಂಕಲ್ಪ ರಾಜ್ಯದ ಜನರಲ್ಲಿ ಮತ್ತು ಹೂಡಿಕೆದಾರರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಹೇಳಿದರು.

ಇನ್ನು ರಾಜ್ಯಪಾಲರ ಭಾಷಣದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾರ್ಯಸಾಧನೆಯ ಪ್ರಸ್ತಾಪ ಸಂತಸ ತಂದಿದೆ ಎಂದು ತಿಳಿಸಿದರು.

Tags:
error: Content is protected !!