ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್.16) ವಿಧಾನ ಪರಿಷತ್ ಸದಸ್ಯ ಎಂ.ಪಿ.ಕುಶಾಲಪ್ಪ ಅವರ ಪ್ರಶ್ನೆಗೆಡ ಉತ್ತರಿಸಿದ ಅವರು, ಕಳೆದ ಜೂನ್ ಮಾಹೆಯಲ್ಲಿ ತಜ್ಞರ ಸಮಿತಿ ರಚಿಸಿ ಕಾವೇರಿ ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತ ತಡೆಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಆದೇಶಿಸಲಾಗಿದೆ. ಅಲ್ಲದೇ ಈ ಕುರಿತು ತಜ್ಞರ ಸಮಿತಿಯೂ ಈಗಾಗಲೇ 2 ಬಾರಿ ಸಭೆ ನಡೆಸಿದ್ದಾರೆ. ಜೊತೆಗೆ ಜುಲೈ 4 ರಂದು ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿಗೆ ಭೇಟಿ ನೀಡಿ ನದಿ ಮಾಲಿನ್ಯದ ಬಗ್ಗೆ ಸದಸ್ಯರಿಂದ ವ್ಯಕ್ತವಾಗಿರುವ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ತಜ್ಞರ ಸಮಿತಿಯೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೂಲಕ ಸರ್ಕಾರಕ್ಕೆ ವರದಿ ನೀಡಿದೆ. ಈ ವರದಿ ಅನ್ವಯ ನದಿಯ ರಕ್ಷಣೆಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಮತ್ತು ತಡೆಯಲು ತಾಂತ್ರಿಕ ಸಮಿತಿಯು ನೀಡಿರುವ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಯೋಜನೆಗಳ ಬಗ್ಗೆ ಮಾಡಲಾಗಿರುವ ಅವಲೋಕನಗಳು, ಶಿಫಾರಸ್ಸುಗಳು ನೀಡಿರುವ ಸಲಹೆ ಮತ್ತು ಮಾರ್ಗೋಪಾಯಗಳ ಬಗ್ಗೆ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಪೌರಾಡಳಿತ ನಿರ್ದೇಶನಾಲಯ, ಕಾವೇರಿ ನೀರಾವರಿ ನಿಗಮ ನಿಯಮಿತ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರು, ಜಲ ಸಂಪನ್ಮೂಲ ಇಲಾಖೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಮಾಲಿನ್ಯ ತಡೆ ಬಗ್ಗೆ ಚರ್ಚಿಸಿ ಸಮಗ್ರ ಕಾರ್ಯನೀತಿಯನ್ನು ರೂಪಿಸಬೇಕಾಗಿದೆ ಎಂದು ಉತ್ತರಿಸಿದ್ದಾರೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…