ರಾಜ್ಯ

ಕಾವೇರಿ ನದಿಗೆ ಕಲುಷಿತ ನೀರಿನ ಸೇರ್ಪಡೆ ಬಗ್ಗೆ ವರದಿ ಸಲ್ಲಿಸಲು ತಜ್ಞರ ಸಮಿತಿ ನೇಮಿಸಲಾಗಿದೆ: ಈಶ್ವರ್‌ ಖಂಡ್ರೆ

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) ವಿಧಾನ ಪರಿಷತ್‌ ಸದಸ್ಯ ಎಂ.ಪಿ.ಕುಶಾಲಪ್ಪ ಅವರ ಪ್ರಶ್ನೆಗೆಡ ಉತ್ತರಿಸಿದ ಅವರು, ಕಳೆದ ಜೂನ್‌ ಮಾಹೆಯಲ್ಲಿ ತಜ್ಞರ ಸಮಿತಿ ರಚಿಸಿ ಕಾವೇರಿ ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತ ತಡೆಯ ಬಗ್ಗೆ ಪರಿಶೀಲಿಸಿ ವರದಿ ನೀಡಲು ಆದೇಶಿಸಲಾಗಿದೆ. ಅಲ್ಲದೇ ಈ ಕುರಿತು ತಜ್ಞರ ಸಮಿತಿಯೂ ಈಗಾಗಲೇ 2 ಬಾರಿ ಸಭೆ ನಡೆಸಿದ್ದಾರೆ. ಜೊತೆಗೆ ಜುಲೈ 4 ರಂದು ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿಗೆ ಭೇಟಿ ನೀಡಿ ನದಿ ಮಾಲಿನ್ಯದ ಬಗ್ಗೆ ಸದಸ್ಯರಿಂದ ವ್ಯಕ್ತವಾಗಿರುವ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ತಜ್ಞರ ಸಮಿತಿಯೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೂಲಕ ಸರ್ಕಾರಕ್ಕೆ ವರದಿ ನೀಡಿದೆ. ಈ ವರದಿ ಅನ್ವಯ ನದಿಯ ರಕ್ಷಣೆಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಮತ್ತು ತಡೆಯಲು ತಾಂತ್ರಿಕ ಸಮಿತಿಯು ನೀಡಿರುವ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಅಲ್ಪಾವಧಿ ಮತ್ತು ದೀರ್ಘಾವಧಿ ಯೋಜನೆಗಳ ಬಗ್ಗೆ ಮಾಡಲಾಗಿರುವ ಅವಲೋಕನಗಳು, ಶಿಫಾರಸ್ಸುಗಳು ನೀಡಿರುವ ಸಲಹೆ ಮತ್ತು ಮಾರ್ಗೋಪಾಯಗಳ ಬಗ್ಗೆ ರಾಜ್ಯ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಪೌರಾಡಳಿತ ನಿರ್ದೇಶನಾಲಯ, ಕಾವೇರಿ ನೀರಾವರಿ ನಿಗಮ ನಿಯಮಿತ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರು, ಜಲ ಸಂಪನ್ಮೂಲ ಇಲಾಖೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಮಾಲಿನ್ಯ ತಡೆ ಬಗ್ಗೆ ಚರ್ಚಿಸಿ ಸಮಗ್ರ ಕಾರ್ಯನೀತಿಯನ್ನು ರೂಪಿಸಬೇಕಾಗಿದೆ ಎಂದು ಉತ್ತರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಕೆರೆಯಲ್ಲಿ ಬಾಲಕನ ಶವ ಪತ್ತೆ ; ಕೊಲೆ ಶಂಕೆ

ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…

2 hours ago

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

8 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

9 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

9 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

12 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

16 hours ago