ಬೆಂಗಳೂರು: ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಶುಕ್ರವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. “ಪ್ರಕೃತಿ ವಿಕೋಪ ನಿವಾರಕ – ನಮ್ಮ ಪರಿಸರ ವಿನಾಯಕ’’ನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಕರೆ ನೀಡಿದ್ದಾರೆ.
ಸಂಕಲ್ಪ: ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡುವುದಿಲ್ಲ; ಬದಲಾಗಿ ಸಣ್ಣ ಮಣ್ಣಿನ ಪರಿಸರ ಸ್ನೇಹಿ ಗಣಪನನ್ನೇ ತಂದು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಮರ -ಗಿಡಗಳಿಗೆ ಹಾಕುತ್ತೇನೆ ಎಂದು ಸಂಕಲ್ಪ ಮಾಡೋಣ ಎಂದು ಅವರು ವಿನಂತಿಸಿದ್ದಾರೆ.
ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದೂ ಈಶ್ವರ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಮುಚ್ಚಳಿಕೆ: ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…