ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಕುಂದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್‌ಎಲ್‌ವಿ ಲ್ಯಾಂಡಿಂಗ್ ಯಶಸ್ವಿಯಾಗಿದೆ.
ಇಂದು ( ಜೂನ್ 23 ) ಬೆಳಿಗ್ಗೆ 7.10ಕ್ಕೆ ಆರ್‌ಎಲ್‌ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದ್ದು, ಈ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಚಿತ್ರದುರ್ಗದಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್‌ನಲ್ಲಿ ನಡೆಸಲಾದ ಅಂತಿಮ ಪರೀಕ್ಷೆಯಲ್ಲಿ ಮರುಬಳಕೆ ಮಾಡಬಲ್ಲ ಲಾಂಚ್ ವೆಹಿಕಲ್ ಪುಷ್ಪಕ್ ಆರ್‌ಎಲ್‌ವಿ ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಆತ್ಮನಿರ್ಭರತೆಯ ನಿಟ್ಟಿನಲ್ಲಿ ಇಸ್ರೋ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಮುಂದಿನ ದಿನಗಳಲ್ಲಿ ಪುಷ್ಪಕ್ ಬಳಸಿ ಉಡ್ಡಯನ ಮಾಡಲು ಸಾಧ್ಯವಾಗಲಿದೆ. ಪುಷ್ಪಕ್ ನಿಖರವಾದ ಸಮತಲ ಲ್ಯಾಂಡಿಂಗ್ ಸಾಧಿಸಿದೆ ಎಂದು ಇಸ್ರೋ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…