ಬೆಂಗಳೂರು: ಸ್ಪೇಸ್ ಡಾಕಿಂಗ್ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಗಳ ಜೋಡಣೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಈ ಮೂಲಕ ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್ ಮತ್ತು ಅನ್ ಡಾಕಿಂಗ್ ಪ್ರಯೋಗ ಯಶಸ್ವಿಯಾಗಿದ್ದು, ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿತ್ತು.
ಈ ಬಗ್ಗೆ ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಇಸ್ರೋ, ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ಡಾಕ್ ಮಾಡಿದೆ. ಭಾರತದ ಇಸ್ರೋದಿಂದ ನಡೆಸಲಾದ ಸ್ಪೇಡೆಕ್ಸ್ ಮಿಷನ್ ಯಶಸ್ಸು ಸಾಧಿಸಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆಪಡುತ್ತೇವೆ ಎಂದು ಹೇಳಿದೆ.
ಭಾರತವು ಯಶಸ್ವಿ ಬಾಹ್ಯಾಕಾಶ ಡಾಕಿಂಗ್ ಸಾಧಿಸಿದ 4ನೇ ರಾಷ್ಟ್ರವಾಗಿದೆ ಎಂದು ಬರೆಯಲಾಗಿದೆ.
ಜೋಡಣೆ ಬಳಿಕ ಸಿಗ್ನಲ್ ಮೂಲಕ ಉಪಗ್ರಹಗಳ ನಿಯಂತ್ರಣ ಯಶಸ್ವಿಯಾಗಿದೆ. ಅನ್‌ಡಾಕಿಂಗ್ ಮತ್ತು ವಿದ್ಯುತ್ ಸರಬರಾಜು ಪರೀಕ್ಷೆಗಳನ್ನು ಮುಂಬರುವ ದಿನಗಳಲ್ಲಿ ನಡೆಸಲಾಗುವುದು ಎಂದು ಇಸ್ರೋ ಹೇಳಿದೆ.
ಜನವರಿ.12ರಂದು ಇಸ್ರೋ ಎರಡು ಬಾಹ್ಯಾಕಾಶ ನೌಕೆಗಳನ್ನು ಮೂರು ಮೀಟರ್ ಸಮೀಪಕ್ಕೆ ತಂದು ಡಾಕಿಂಗ್‌ಗೂ ಮುನ್ನ ಪ್ರಾಯೋಗಿಕ ಪ್ರಯತ್ನವನ್ನು ನಡೆಸಿತ್ತು. ಬಳಿಕ ಎರಡೂ ಉಪಗ್ರಹಗಳನ್ನು ಹಿಂದಕ್ಕೆ ಸರಿಸಿ ಸುರಕ್ಷಿತವಾಗಿ ನೆಲೆಗೊಳಿಸಿತ್ತು.
ಇನ್ನು 2024ರ ಡಿಸೆಂಬರ್.30ರಂದು ಬಾಹ್ಯಾಕಾಶ ಡಾಕಿಂಗ್ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ಆರಂಭಿಸಿತ್ತು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…