ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ.
ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಲೇಬೇಕೆಂಬ ನಿಯಮದಲ್ಲಿ ಈ ವರ್ಷವೂ ವಿನಾಯಿತಿ ನೀಡಲಾಗಿದೆ. 60 ದಿನಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದೆ. ಎರಡು ತಿಂಗಳ ರಿಯಾಯಿತಿ ತರುತ್ತೇವೆ. ಅದರಂತೆ 2026-27ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿ ಸಂಬಂಧ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುತ್ತದೆ. ಒಂದನೇ ತರಗತಿ ದಾಖಲಾತಿಗೆ 6 ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳುವಂತೆ ಇತ್ತ ಎಲ್ಕೆಜಿ ಹಾಗೂ ಯುಕೆಜಿ ಮಟ್ಟದಲ್ಲೇ ದಾಖಲಾತಿ ವಯೋಮಿತಿ ನಿಗದಿ ಮಾಡುವ ಸಂಬಂಧ ಕಾಯ್ದೆ ತರಲಾಗುವುದು. ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿಗೆ ಈಗ ವಯೋಮಿತಿ ನಿಗದಿ ಮಾಡುವ ಕಾನೂನು ಇಲ್ಲ.
ಹೀಗಾಗಿ ದಾಖಲಾತಿಗೆ ಸಮಸ್ಯೆಯಾಗುತ್ತಿದೆ. ಅಲ್ಲಿಗೆ ಹೊಸದಾದ ಕಾನೂನು ತಂದು ಖಾಯಂ ಪರಿಹಾರ ತರಲಾಗುವುದು. ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮಕ್ಕೆ ಎಲ್ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿ ವಯೋಮಿತಿ ನಿಗದಿ ಸಂಬಂಧ ಕಾಯ್ದೆಯನ್ನು ರೂಪಿಸಿ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…