ರಾಜ್ಯ

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ ಕಡ್ಡಾಯ ನಿಯಮದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರ ವಿನಾಯ್ತಿ ನೀಡಿದೆ.

ಈ ಸಂಬಂಧ ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಲೇಬೇಕೆಂಬ ನಿಯಮದಲ್ಲಿ ಈ ವರ್ಷವೂ ವಿನಾಯಿತಿ ನೀಡಲಾಗಿದೆ. 60 ದಿನಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದೆ. ಎರಡು ತಿಂಗಳ ರಿಯಾಯಿತಿ ತರುತ್ತೇವೆ. ಅದರಂತೆ 2026-27ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ದಾಖಲಾತಿ ಸಂಬಂಧ 60 ದಿನಗಳ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿ ಬದಲಾವಣೆ ಮಾಡಲಾಗುತ್ತದೆ. ಒಂದನೇ ತರಗತಿ ದಾಖಲಾತಿಗೆ 6 ವರ್ಷದ ಕಡ್ಡಾಯ ನಿಯಮಕ್ಕೆ ಹೊಂದಿಕೊಳ್ಳುವಂತೆ ಇತ್ತ ಎಲ್​ಕೆಜಿ ಹಾಗೂ ಯುಕೆಜಿ ಮಟ್ಟದಲ್ಲೇ ದಾಖಲಾತಿ ವಯೋಮಿತಿ ನಿಗದಿ ಮಾಡುವ ಸಂಬಂಧ ಕಾಯ್ದೆ ತರಲಾಗುವುದು. ಎಲ್​ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿಗೆ ಈಗ ವಯೋಮಿತಿ ನಿಗದಿ ಮಾಡುವ ಕಾನೂನು ಇಲ್ಲ.

ಹೀಗಾಗಿ ದಾಖಲಾತಿಗೆ ಸಮಸ್ಯೆಯಾಗುತ್ತಿದೆ.‌ ಅಲ್ಲಿಗೆ ಹೊಸದಾದ ಕಾನೂನು ತಂದು ಖಾಯಂ ಪರಿಹಾರ ತರಲಾಗುವುದು.‌ ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮಕ್ಕೆ ಎಲ್​​ಕೆಜಿ, ಯುಕೆಜಿಗೆ ಮಕ್ಕಳ ದಾಖಲಾತಿ ವಯೋಮಿತಿ ನಿಗದಿ ಸಂಬಂಧ ಕಾಯ್ದೆಯನ್ನು ರೂಪಿಸಿ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

9 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

10 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

10 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

10 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

11 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

11 hours ago