Mysore
31
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಮೇಶ್ವರ್‌ ಹೇಳಿಕೆಯನ್ನು ಅವರಿಗೆ ಕೇಳಬೇಕು. ಅವರು ಗೃಹ ಸಚಿವರಿದ್ದಾರೆ. ಅವರು ಹೇಳಿದಂತೆ ಕೇಳಬೇಕು. ನಮ್ಮ ಅಣ್ಣ ಇವತ್ತೇ ಸಿಎಂ ಆಗುತ್ತಾರೆ ಅಂತಾ ಏನೂ ಹೇಳಿಲ್ಲ. ಸಿಎಂ ಆಗಬೇಕು ಎಂಬ ಆಸೆ ಇದೆ. ಆಸೆ ಇಲ್ಲ ಅಂತಾ ಹೇಳಿಲ್ಲ. ಇನ್ನೂ ಸಮಯವಿದೆ. ಉಪಚುನಾವಣೆ ಮುಗಿದ ಮೇಲೆ ಮಾತನಾಡೋಣ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Tags:
error: Content is protected !!