ಬೆಂಗಳೂರು : ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಹಾಗೂ ಜಿಎಸ್‌ಟಿ ಇಲಾಖೆ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ದಾಳಿ ನಡೆಸಿ ಸುಮಾರು 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ.
ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬಯಲಾಗಿದೆ. ನಗರದ ಕೇಂದ್ರ ವಿಭಾಗ ಸೇರಿದಂತೆ ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರಸ್ಥರ ಮಳಿಗೆಗಳ ಮೇಲೆ ದಾಳಿ ನಡೆದಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಒಣಹಣ್ಣುಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ, ಮಾರಾಟದಲ್ಲಿ ತೆರಿಗೆ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಅಽಕಾರಿಗಳು ತಿಳಿಸಿದ್ದಾರೆ.
ಕಳೆದ ೧೫ ದಿನಗಳಲ್ಲಿ ಬೆಂಗಳೂರಿನಲ್ಲಿ ಐಟಿ ಹಾಗೂ ಜಿಎಸ್‌ಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ೫೦೦ ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿ, ೧೦೦ ಕೋಟಿ ರೂ. ಮರೆಮಾಚಿದ್ದ ವಹಿವಾಟು ಪತ್ತೆ ಮಾಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ತೆರಿಗೆ ವಂಚನೆ ನಡೆಸಿದ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ಮೈಸೂರು| ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
ದಾಳಿ ವೇಳೆ ಪತ್ತೆಯಾಗಿರುವ ಅಕ್ರಮಗಳು
* ತೆರಿಗೆ ಬಿಲ್ ಇಲ್ಲದೇ ಸರಕು ಖರೀದಿ
* ಖರೀದಿ ಬಿಲ್‌ಗಳಿಗಿಂತ ಹೆಚ್ಚಾಗಿ ಸರಕು ಖರೀದಿ
* ಬಿಲ್ ನೀಡದೆ ಸರಕು ಮಾರಾಟ
* ಕಬ್ಬಿಣ, ಉಕ್ಕು, ಹಾರ್ಡ್‌ವೇರ್, ಸಿಮೆಂಟ್ ವ್ಯಾಪಾರಿಗಳಿಂದ ತೆರಿಗೆ ತಪ್ಪಿಸಲು ಮಾಲುಗಳ ಜತೆಯಲ್ಲದ ನಕಲಿ ಬಿಲ್‌ಗಳನ್ನು ನೀಡಿರುವುದು
* ಗುತ್ತಿಗೆದಾರರಿಗೆ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಸಹಾಯಕವಾಗುವ ನಕಲಿ ಬಿಲ್ ಜಾಲ
* ೪೦ ಲಕ್ಷ ರೂ. ಮೀರಿದ ವಹಿವಾಟು ಇದ್ದರೂ ಜಿಎಸ್‌ಟಿ ನೋಂದಣಿ ಮಾಡದೇ ವ್ಯವಹಾರ
* ದಾಖಲೆ ಇಲ್ಲದೆ ಸಾಗಿಸುತ್ತಿದ್ದ ೧,೦೦೦ ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ವಶ
* ಸರಿಯಾದ ಬಿಲ್ ಇಲ್ಲದೆ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ ೭೫ ವಾಹನಗಳು ವಶಕ್ಕೆ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…