Categories: ರಾಜ್ಯ

ಇದು ಮನೆಯಲ್ಲಿ ಹೆಣ್ಣು ಜನಿಸಿದರೆ ಸಂಭ್ರಮಿಸುವ ಕಾಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಹೇಳಿಕೆ
ವಿಜಯಪುರ: ಪ್ರತಿಯೊಬ್ಬ ವಿದ್ಯಾರ್ಥಿಗಳು ತಂದೆ-ತಾಯಿಯ ಕನಸನ್ನು ನನಸು ಮಾಡಬೇಕು. ಇದಕ್ಕೆ ಕಠಿಣ ಶ್ರಮದ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವತಿಯಿಂದ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶವಾಗಿದ್ದಾರೆ ಎಂದರು.

ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ. ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ. ಆದರೆ, ಸಾವಿರ ಮೀಟರ್ ಓಡಿದರೂ ಮಹಿಳೆಯರಿಗೆ ಮೆಡಲ್ ಕೊಡಲು ಹಿಂದೆ ಮುಂದೆ ನೋಡಲಾಗುತ್ತದೆ ಎಂದು ಸಚಿವರು ಹೇಳಿದರು.

ಹೆಣ್ಣು ಮಕ್ಕಳಲ್ಲಿ ಪರಸ್ಪರ ಸಹಕಾರ ಇರಬೇಕು. ಇಂದು ಹೆಣ್ಣು ಮಕ್ಕಳು ತೊಟ್ಟಿಲಿಗೆ ಸೀಮಿತವಿಲ್ಲ. ಇಂದು ಹೆಣ್ಣು ಹುಟ್ಟಿದರೂ ಸಂಭ್ರಮ ಪಡುವ ಸಂದರ್ಭದಲ್ಲಿ ನಾವಿದ್ದೇವೆ. ಸುಂದರ ಸಮಾಜ, ಸಂಸ್ಕೃತಿ ದೇಶದಲ್ಲಿ ನಾವಿದ್ದೇವೆ ಎಂದು ಸಚಿವರು ಹೇಳಿದರು.

ಕಷ್ಟ ಎಲ್ಲರಿಗೂ ಇರುತ್ತದೆ. ಆದರೆ ಗುರಿ ತಲುಪುವುದು ಮುಖ್ಯ, ಗುರಿ ಇಲ್ಲದ ಜೀವನ ಬೋರಗಲ್ಲ ಮೇಲೆ ಮಳೆ ಸುರಿದಂತೆ. ಪ್ರಾಮಾಣಿಕವಾದ ಗುರಿ ಇರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರತಿಯೊಬ್ಬರು ತಂದೆ ತಾಯಿ ಕನಸುಗಳನ್ನು ಈಡೇರಿಸಬೇಕು. ನಾನೂ ಕೂಡ ಹಿಂದುಳಿದ ಪ್ರದೇಶದಿಂದ ಬಂದಿದ್ದೇನೆ. ಕೆಂಪು ಬಸ್ಸಿನಲ್ಲಿ ಓಡಾಡಿದ್ದೇನೆ‌. ಇಂದಿಗೂ ಅದೇ ಛಲ ನನ್ನಲ್ಲಿದೆ ಎಂದರು‌.

ಇರುವೆಗಳಿಗೂ ಸ್ವಾಭಿಮಾನ ಇರುತ್ತದೆ. ಮುಂದಾಲೋಚನೆ ಇರುತ್ತದೆ. ಮನುಷ್ಯರಾದ ನಮಗೆ ಮುಂದಿನ 80 ವರ್ಷಕ್ಕೆ ಜೀವನ ರೂಪಿಸುವ ಪರಿಕಲ್ಪನೆ ಬೇಕಲ್ಲವೇ. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ. ಜೀವನ ವಿಕಸನ ಮಾಡಿಕೊಳ್ಳಲು ಇದು ಪ್ರಮುಖ ಘಟ್ಟ. ದೇಶ ಎತ್ತರಕ್ಕೆ ಬೆಳೆಯುತ್ತಿದೆ, ಇಂದಿನ  ಸ್ಪರ್ಧಾತ್ಮಕ ಯುಗಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಕರೆ ನೀಡಿದರು.

ಮುಂದೆ ಹುಟ್ಟುವ ನಿಮ್ಮ ಮಕ್ಕಳಿಗೆ ನೀವೇ ಆದರ್ಶವಾಗಿರಿ, ಅರುಣಿಮಾ ಸಿನ್ಹಾ, ಸುಪ್ರಿಯಾ ರಾಯ್ ಅವರಂಥ ಮಹಿಳೆಯರು ಜೀವನದ ಪ್ರತಿಯೊಂದು ಹಂತದಲ್ಲೂ ಸ್ಫೂರ್ತಿಯಾಗಲಿ ಎಂದರು‌.

ಮಹಿಳೆ ಎಂದರೆ ಸಾಧನೆ, ಜೀವನದಲ್ಲಿ ಸಾಧನೆ ಬಹಳ ಮುಖ್ಯ. ಮಹಿಳೆ ಇಲ್ಲದೆ ಮನೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ರಾಜಕೀಯದ ಕೂಡ. ಮಹಿಳಾ ಮೀಸಲಾತಿಯನ್ನು ನಾವೇ ಮಾಡಿದ್ದು, ಆಗ ಬಹುಮತ ಕೊರತೆಯಿಂದ ಲೋಕಸಭೆಯಲ್ಲಿ ಪಾಸ್ ಆಗಲಿಲ್ಲ. ಈಗ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ.ಬಿ.ಕೆ.ತುಳಸಿಮಾಲ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಪ್ರೊ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ  ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago