ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ಜ.25 ರಂದು ಮೈಸೂರಿನಲ್ಲಿ ಅಹಿಂದಾ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಯಾವ ಲೇಬಲ್‍ನಲ್ಲಿ ಅವರು ಮಾಡುತ್ತಿದ್ದಾರೆ. ಅಹಿಂದಾ ಬಗ್ಗೆ ವ್ಯಾಖ್ಯಾನ ಮಾಡಿ ವಿವರಿಸುವುದು ಕಷ್ಟ ಎಂದ ಅವರು, ಮುಖ್ಯಮಂತ್ರಿಯಾಗಿದ್ದವರು ಅಹಿಂದಾ ನಾಯಕರೇ ಆಗಿದ್ದರೇ, ಒಂದು ಕ್ಷೇತ್ರ ಹುಡುಕಲು ಒಂದು ವರ್ಷ ಕಾಲ ಎಷ್ಟು ಚರ್ಚೆ ಮಾಡಿದರು ಎಂದು ಪ್ರಶ್ನಿಸಿದರು.
ಮೈಸೂರು, ಬಾದಾಮಿ, ಕೋಲಾರ ಎಲ್ಲಿ ನಿಲ್ಲಬೇಕೆಂಬ ವರ್ಷಕಾಲ ಚರ್ಚೆ ಮಾಡಿದರು. ಅಹಿಂದಾ ನಾಯಕರೇ ಆಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ನಿಂತು ಗೆಲ್ಲಬಹುದಾಗಿತ್ತು. ಕಳೆದ ಚುನಾವಣೆಯಲ್ಲಿ ಪುತ್ರ ಸಿದ್ದರಾಮಯ್ಯ ಅವರಿಗೆ ಕ್ಷೆತ್ರ ಬಿಟ್ಟುಕೊಡಬೇಕಾಯಿತು ಎಂದರು.
ಇದನ್ನು ಓದಿ: ಸಿಲಿಂಡರ್ ಸ್ಪೋಟ ಪ್ರಕರಣ | ಮೃತ ಸಲೀಂ ಜೊತೆ ಬಂದವರು ನಾಪತ್ತೆ ; ಲಾಡ್ಜ್ ಶೋಧ
ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಕಠಿಣವಾಗಿ ಮಾತನಾಡಿದ್ದಾರೆ. ಅವರ ಹಿರಿಯ ಮಗ ನಿಧನವಾದಾಗ ಮನೆಗೆ ಹೋಗಿದ್ದೆ. ಈ ವಯಸ್ಸಲ್ಲೂ ಎಷ್ಟು ದುಡಿಯುತ್ತಿ?ರಿ? ಎಂದು ಕೇಳಿದ್ದರು. ನೀವೆಲ್ಲಾ ಪಕ್ಷ ಬಿಟ್ಟು ಹೋದ ಮೇಲೆ ಪಕ್ಷ ಉಳಿಲು ದುಡಿಯುತ್ತಿದ್ದೇನೆ. ಹೀಗೆ ಎರಡನೇ ಪುತ್ರನನ್ನು ರಾಜಕೀಯಕ್ಕೆ ತಂದಿದ್ದಾರೆ. ಒಳಮೀಸಲಾತಿಯಲ್ಲಿ ಯಾವಯಾವ ಜಾತಿಗೆ ಎಷ್ಟೆಷ್ಟು ಮೀಸಲಾತಿ ಕೊಟ್ಟಿದ್ದೀರಿ ಎಂಬುದನ್ನು 16 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ಹೇಳಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದವರ್ಯಾರು?, ಮುಸ್ಲಿಂರಿಗೆ ಮೀಸಲಾತಿ ಕಲ್ಪಿಸಿದವರ್ಯಾರು? ಎಂದು ಪ್ರಶ್ನಿಸಿದರು.
ಕೇರಳದಲ್ಲಿ ಜೆಡಿಎಸ್ ಪಕ್ಷ ಎಡಪಂಥೀಯ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಜ.18 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡುತ್ತೆ?ವೆ. ಜ.23 ರಂದು ಹಾಸನದಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತೆ?ವೆ. ಜ.24 ರಂದು ಬಾಗಲಕೋಟೆಯಲ್ಲಿ ಸಭೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…