ರಾಜ್ಯ

ಹಾಲಿನ ದರ ಏರಿಕೆ ಮಾಡೋದು ಕೆಎಂಎಫ್‌ , ಸರ್ಕಾರ ಅಲ್ಲ : ಸಿಎಂ

ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್‌ ಕೊಟ್ಟಿದೆ.‌ ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಹೇಳಿದರು.
ಅಲ್ಲದೆ ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡುತ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ. ನನಗೆ ಗೊ‌ತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 mins ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

13 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

21 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

1 hour ago