It is not true that the government has no money: Former MP D.K. Suresh
ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ ಬಳಿ ಹಣ ಇಲ್ಲ ಎಂದು ಹೇಳುವುದು ಸರಿಯಲ್ಲ, ಹಿಂದಿನ ಸರ್ಕಾರ ಮೂರ್ನಾಲ್ಕು ವರ್ಷಗಳಾದರೂ ಬಾಕಿ ತೀರಿಸಲಾಗದಷ್ಟು ಕಾಮಗಾರಿಗಳನ್ನು ಮಂಜೂರು ಮಾಡಿದೆ. ನಗರಾಭಿವೃದ್ಧಿ ಇಲಾಖೆಯಲ್ಲಿ 5 ವರ್ಷಗಳಿಗಾಗುವಷ್ಟು ಕಾಮಗಾರಿಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರಾತಿ ನೀಡಿವೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ 10 ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಿದೆ. ನೀರಾವರಿ ಇಲಾಖೆಯಲ್ಲಿ ಒಂದು ಲಕ್ಷ ಕೋಟಿ ರೂ.ನಷ್ಟು ಮಂಜೂರಾತಿಯಾಗಿದೆ. ಇದನ್ನು ತೀರಿಸಲು ನಮ್ಮ ಸರ್ಕಾರ ಹಣ ನೀಡಬೇಕು. ಬಿಜೆಪಿ ಸರ್ಕಾರ ಹಣ ಇಟ್ಟು ಹೋಗಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…