ರಾಜ್ಯ

ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಹೊಣೆ ನಮ್ಮದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗರ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುವ ಮೂಲಕ ನೊಂದ ಉಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದಿದ್ದಾರೆ.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಇನ್ನು ಘಟನಾಸ್ಥಳಕ್ಕೆ ಪೊಲೀಸ್‌ ಆಯುಕ್ತ ಎಸ್.ಎನ್‌ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್‌ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗೃಹಸಚಿವ ಡಾ. ಜಿ ಪರಮೇಶ್ವರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಕೆಯ ಆರೋಗ್ಯ ವಿಚಾರಿಸಿದ್ದಾರೆ.
lokesh

Recent Posts

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

11 mins ago

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

37 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

3 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

13 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

13 hours ago