ರಾಜ್ಯ

ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಹೊಣೆ ನಮ್ಮದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗರ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುವ ಮೂಲಕ ನೊಂದ ಉಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದಿದ್ದಾರೆ.
ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಇನ್ನು ಘಟನಾಸ್ಥಳಕ್ಕೆ ಪೊಲೀಸ್‌ ಆಯುಕ್ತ ಎಸ್.ಎನ್‌ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್‌ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗೃಹಸಚಿವ ಡಾ. ಜಿ ಪರಮೇಶ್ವರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಕೆಯ ಆರೋಗ್ಯ ವಿಚಾರಿಸಿದ್ದಾರೆ.
lokesh

Recent Posts

ಅರ್ನಾಬ್‌ ಅಬ್ಬರಕ್ಕೆ ಆಂಧ್ರ–ಒಡಿಶಾ ತತ್ತರ: ಸಾವಿನ ಸಂಖ್ಯೆ 6ಕ್ಕೆ ಏರಿಕೆ!

ನವದೆಹಲಿ: ಅರ್ನಾಬ್‌ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶ ಹಾಗೂ ಒಡಿಶಾದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಚಂಡಮಾರುತ ಸಂಬಂಧಿತ ಘಟನೆಗಳಲ್ಲಿ ಸಾವಿನ ಸಂಖ್ಯೆ…

13 hours ago

ತೀವ್ರ ಬೆನ್ನುನೋವು: ಜೈಲಿನಲ್ಲಿ ಫಿಸಿಯೋಥೆರಪಿಗೆ ಅನುಮತಿ ಕೋರಿ ದರ್ಶನ್‌ ಅರ್ಜಿ

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌, ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.…

13 hours ago

ಹಾಸನಾಂಬೆ ದೇವಾಲಯದ ಗರ್ಭಗುಡಿ ಓಪನ್:‌ ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ…

15 hours ago

ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ, 6 ಸಾವು!

ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…

17 hours ago

ರೈಲು ಪ್ರಯಾಣಿಕರೇ ಗಮನಿಸಿ: ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್‌ ಚಾರ್ಜಿಂಗ್‌ ಬಂದ್‌!

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್‌ ಚಾರ್ಜ್‌ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…

17 hours ago

ಓದುಗರ ಪತ್ರ: ಕಿಡಿಗೇಡಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…

19 hours ago