Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿಎಂ-ಡಿಸಿಎಂ ನಡುವಿನ ಕಿತ್ತಾಟ ಹೊಡೆದಾಡಿಕೊಳ್ಳುವ ಹಂತಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಸಿಎಂ ಹಾಗೂ ಡಿಸಿಎಂ ನಡುವೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಇದು ತಾರಕಕ್ಕೇರಿದೆ. ಸಿದ್ದರಾಮಯ್ಯ ತಾನೇ 5 ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ ಡಿಸಿಎಂ ಡಿಕೆಶಿ ಒಳ್ಳೆಯದಾಗಲಿ ಎಂದಿದ್ದಾರೆ. ಆದರೆ ಸಚಿವರ, ಶಾಸಕರ ಪ್ರತ್ಯೇಕ ಸಭೆಗಳನ್ನು ಮಾಡಿ ಬೆಂಬಲ ಪಡೆಯುವ ಪ್ಲಾನ್ ಮಾಡುತ್ತಿದ್ದಾರೆ. ಸಾಲದ್ದಕ್ಕೆ ನಿನ್ನೆ ಜೈಲಿಗೆ ಹೋಗಿ ಅಲ್ಲಿರುವ ಇಬ್ಬರು ಶಾಸಕರು ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್‌ಗೆ ಇಂತಹ ಪಾಡು ಬಂದಿರುವುದು ಶೋಚನೀಯ ಸ್ಥಿತಿ ಎಂದು ಗುಡುಗಿದರು.
ಡಿಸಿಎಂ ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಜೈಲು ಪಾಲಾಗಿರುವ ಶಾಸಕರ ಬೆಂಬಲ ಕೇಳಲು ಜೈಲಿಗೆ ಹೋಗಿ ಚರ್ಚಿಸಿದ್ದಾರೆ ಎಂದರೆ ರಾಜ್ಯದ ಜನತೆ ತೀರ್ಮಾನ ಮಾಡಬೇಕು. ರಾಜ್ಯದ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…