ಬೆಂಗಳೂರು: ರಾಜ್ಯದಲ್ಲಿ ಯಾವುದೇ ಮೊಹಮ್ಮದ್ ಬಿನ್ ತುಘಲಕ್ ಆಡಳಿತಲ್ಲಿ ಇರುವುದೊಂದೇ ಸಿದ್ದರಾಮಯ್ಯ ಆಡಳಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು.
ಕನ್ನಡಿಗೆ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್ ಆಧರಿಸಿ ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಪೋಸ್ಟ್ ಪದೇ ಪದೇ ಬದಲಾಗುತ್ತಿದ್ದು, ತಮ್ಮ ನಿಲುವುಗಳನ್ನು ಬದಲಿಸುತ್ತಿದ್ದಾರೆ. ಈ ಬೆಳವಣಿಗೆ ರಾಜ್ಯಕ್ಕೆ ಒಳಿತಾಗುವುದಿಲ್ಲ. ಇದೊಂದು ತುಘಲಕ್ ರೀತಿಯ ಆಡಳಿತ ವ್ಯವಸ್ಥೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದಕ್ಕೆ ಸದನದಲ್ಲೇ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಇಲ್ಲಿ ಇರುವುದು ಕೇವಲ ಸಿದ್ದರಾಮಯ್ಯ ಸರ್ಕಾರವೇ ಹೊರತು ಯಾವುದೇ ತುಘಲಕ್ ಸರ್ಕಾರವಲ್ಲ. ಕನ್ನಡಿಗರಿಗೆ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕದ ಬಗ್ಗೆ ಸಚಿವ ಸಂಪುಟದಲ್ಲಿ ಸಮಗ್ರವಾದ ಚರ್ಚೆಯಾಗಿಲ್ಲ. ಆ ಕೂಡಲೇ ಇದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಗೊಂದಲ ಉಂಟಾಗಿತ್ತು. ಮುಂದಿನ ಸಂಪುಟದಲ್ಲಿ ಕೂಲಂಕುಷವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳುವ ಮೂಲಕ ಎಲ್ಲಾ ಗೊಂದಲಗಳನ್ನು ನಿವಾರಿಸುವ ಕೆಲಸ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.





