ರಾಜ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ

ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಶುಕ್ರವಾರ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿ ಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ. ಎಲ್ಲ ಊರುಗಳಲ್ಲಿ ಹಮ್ಮಿಕೊಳ್ಳುವ ಜಾತ್ರೆ, ಉತ್ಸವಗಳು ಜಾತಿ , ಧರ್ಮಗಳನ್ನು ಮರೆತು ಮನುಷ್ಯರಾಗಬೇಕು ಎನ್ನುವ ಸಂದೇಶವನ್ನು ಸಾರುತ್ತದೆ. ಮನುಷ್ಯರು ಪರಸ್ಪರ ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಯಾವುದೇ ಧರ್ಮ ದ್ವೇಷಿಸಲು ಹೇಳುವುದಿಲ್ಲ ಎಂದರು.

ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ
ಕನ್ನಡ ನಾಡಿನಲ್ಲಿ ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಅನೇಕರು ಆಗಿಹೋಗಿದ್ದಾರೆ. ಇವರೆಲ್ಲರೂ ನಾವೆಲ್ಲ ಮನುಷ್ಯರೇ ಎಂದು ಸಾರಿ ಸಾರಿ ಹೇಳಿದವರು. ಬಸವಣ್ಣ ಜಾತಿ, ಧರ್ಮ, ವರ್ಗ, ಕಂದಾಚಾರ, ಮೌಢ್ಯಗಳು ತೊಲಗಬೇಕು ಎಂದು ಕರೆ ನೀಡಿದ್ದರು. ಹುಟ್ಟು ಮತ್ತು ಸಾವು, ಇವೆರಡರ ಮಧ್ಯೆ ನಾವೇನು ಮಾಡುತ್ತೇವೆ ಎನ್ನುವುದು ಮುಖ್ಯ. ಏನು ಸಾಧಿಸಿದೆವು, ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ . ಬೇರೆಯವರು ಅನುಸರಿಸುವ ರೀತಿಯಲ್ಲಿ ನಮ್ಮ ಹೆಜ್ಜೆ ಗುರುತುಗಳು ಇರಬೇಕೇ ಹೊರತು, ಅದನ್ನು ವಿರೋಧಿಸುವಂತಿರಬಾರದು ಎಂದರು.

ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು
ಭವ್ಯವಾದ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು. ನಾವೆಲ್ಲರೂ ಒಂದೇ ಎಂದು ಬಾಳಬೇಕಿರುವುದು ಅವಶ್ಯ ಎಂದರು.

ಪದ್ಮಿನಿ ರವಿ ಹಾಗೂ ನಂದಿನಿ ಆಳ್ವ ಅವರು ಪ್ರಾರಂಭಿಸಿದ ಬೆಂಗಳೂರು ಹಬ್ಬವನ್ನು ರವಿಚಂದರ್ ಮತ್ತು ಪ್ರಶಾಂತ್ ಪ್ರಕಾಶ್ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ
ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ ಎಂದರು.
ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು ಎಂದರು.

ಕನ್ನಡತನವನ್ನು ಬೆಳೆಸೋಣ
ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡತನವನ್ನು ಬೆಳೆಸೋಣ. ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಬೆಂಗಳೂರಿನಲ್ಲಿ 1.40 ಕೋಟಿ ಜನ ನೆಲೆಸಿದ್ದಾರೆ. ನಾವೆಲ್ಲರೂ ಒಂದಾಗಿ ಬಾಳೋಣ, ಮನುಷ್ಯರಾಗೋಣ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಪ್ಪಡಿ ಜಾತ್ರೆ ಸಂಭ್ರಮ: ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ

ಭೇರ್ಯ ಮಹೇಶ್:‌ ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ…

5 mins ago

ರಾಜ್ಯಸಭೆಗೆ ನಿತೀಶ್‌ ಕುಮಾರ್‌ ನಾಮಪತ್ರ ಸಲ್ಲಿಕೆ

ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್‌ ಕುಮಾರ್‌ ಅವರು ಇಂದು…

38 mins ago

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…

59 mins ago

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

7 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

7 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

7 hours ago