ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.
ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ ಪುನರ್‍ವಸತಿ ಕಲ್ಪಿಸಿಕೊಡಲು ಮುಂದಾಗಿದೆ ಎಂಬುದನ್ನು ಅವರು ಬಲವಾಗಿ ಸಮರ್ಥನೆ ಮಾಡಿಕೊಂಡರು.
ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್‍ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.
ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.
ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.
ಬಾಂಗ್ಲಾದೇಶದವರು ನೆಲೆಸಿದ್ದಾರೆ ಎನ್ನುವುದು ಊಹಾಪೋಹ. ಊಹಾಪೋಹಗಳ ಮೇಲೆ ಹೇಳಿಕೆ ಮಾಡಬಾರದು. ರಾಜ್ಯದವರು ಯಾರು?, ಹೊರ ರಾಜ್ಯದವರು ಯಾರು ಇದ್ದಾರೆ? ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿ. ವಸೀಂ ನನ್ನ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಯಾರೇ ಭಾಗಿಯಾಗಿದರೂ ಕಾನೂನು ಕ್ರಮ ನಡೆಯಲಿ. ಬಿಜೆಪಿ ಕಾರ್ಯಕರ್ತರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕ್ರಮ ಆಗಲಿ ಎಂದು ಆಗ್ರಹಿಸಿದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…