ರಾಜ್ಯ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ವಲಸಿಗರು ಇದ್ದದ್ದು ನಿಜ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಬೆಂಗಳೂರು ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ.

ಆದರೆ ಸರ್ಕಾರ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮಾನವೀಯತೆ ದೃಷ್ಟಿಯಿಂದ ಪುನರ್‍ವಸತಿ ಕಲ್ಪಿಸಿಕೊಡಲು ಮುಂದಾಗಿದೆ ಎಂಬುದನ್ನು ಅವರು ಬಲವಾಗಿ ಸಮರ್ಥನೆ ಮಾಡಿಕೊಂಡರು.

ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಕೃಷ್ಣಬೈರೇಗೌಡ ಅವರು, ಕೋಗಿಲು ಲೇಔಟ್‍ನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿದರು.

ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ನಿವೇಶನ ಯಾರಿಗೆ ಸೇರಿದ್ದರೂ ಅದು ಸರ್ಕಾರದ ಸ್ವತ್ತೆ. ಇಂತಹ ಜಾಗದಲ್ಲಿ ಮನೆ ನಿರ್ಮಿಸಿದಾಗ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದರು.

ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿರುವ ಕಾರಣ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ಬಾಂಗ್ಲಾದೇಶದವರು ನೆಲೆಸಿದ್ದಾರೆ ಎನ್ನುವುದು ಊಹಾಪೋಹ. ಊಹಾಪೋಹಗಳ ಮೇಲೆ ಹೇಳಿಕೆ ಮಾಡಬಾರದು. ರಾಜ್ಯದವರು ಯಾರು?, ಹೊರ ರಾಜ್ಯದವರು ಯಾರು ಇದ್ದಾರೆ? ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿ. ವಸೀಂ ನನ್ನ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಯಾರೇ ಭಾಗಿಯಾಗಿದರೂ ಕಾನೂನು ಕ್ರಮ ನಡೆಯಲಿ. ಬಿಜೆಪಿ ಕಾರ್ಯಕರ್ತರು ಅಕ್ರಮದಲ್ಲಿ ಭಾಗಿಯಾಗಿದ್ದರೆ ಕ್ರಮ ಆಗಲಿ ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago