ಬೆಂಗಳೂರು: ಲಂಚ, ಭ್ರಷ್ಟಾಚಾರದ ಪ್ರಯತ್ನ ಹಾಗೂ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಅರೋಪದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸುಧಾಕರ ಆಪ್ತ, ಬಿಜೆಪಿ ಮಾಜಿ ಜಿಲ್ಲಾದ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ಏ. 25 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿ 4.82 ಕೋಟಿ ಹಣವನ್ನು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಉತ್ತರ ತಾಲ್ಲೂಕಿನ ಚುನಾವಣಾ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ವಾಟ್ಸ್ ಆಪ್ ಕರೆಮಾಡಿ ಗೋವಿಂದಪ್ಪಗೆ ಸಹಾಯ ಮಾಡಿ, ಹಣ ವಾಪಸ್ ಕೊಡಿಸುವಂತೆ ಹೇಳಿದ್ದಾರೆ. ಅಲ್ಲದೇ ಗೋವಿಂದಪ್ಪ ಕೂಡ ಮೌದ್ಗಿಲ್ ಅವರಿಗೆ ವಾಟ್ಸ್ ಆಪ್ ಮೂಲಕ ನನಗೆ ಸಹಾಯ ಮಾಡಿ ಅಂತ ಸಂದೇಶ ಕಳುಹಿಸಿದ್ದಾರೆ.
ಈ ಎಲ್ಲಾ ಮಾಹಿತಿಯನ್ನು ಸಾಕ್ಷಿ ಸಮೇತ ಮೌದ್ಗಿಲ್ ಅವರು ಐಟಿ ಅಧಿಕಾರಿಗಳಿಗೆ ನೀಡಿದ್ದಾರೆ. ಬಳಿಕ ಎಸ್ಎಸ್ ಟಿ ಅಧಿಕಾರಿ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಚಾರದ ಪ್ರಯತ್ನ ಮಾಡಿದ್ದಕ್ಕಾಗಿ ಆರ್ ಪಿ ಕಾಯಿದೆ 1951 ರ ಸೆಕ್ಷನ್ 171ಬಿ, 171ಸಿ ಅಡಿಯ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…