ಬೆಂಗಳೂರು : ನಾನು ‘ಸೋಮಾರಿ ಸಿದ್ದ’ ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ ಜಾತಿ ಎತ್ತಿಕಟ್ಟುವ ರಾಜಕಾರಣ ಮಾಡಬೇಕಿತ್ತಾ? ಅಭಿವೃದ್ಧಿ ರಾಕಾರಣ ಮಾಡಿದ್ದೇ ತಪ್ಪಾ?
ಕರ್ನಾಟಕದಲ್ಲಿ 28 ಎಂಪಿಗಳಿದ್ದಾರೆ, ಯಾಕೆ ಮೈಸೂರು ಎಂಪಿಯನ್ನೇ ಟಾರ್ಗೆಟ್ ಮಾಡುತ್ತಾರೆ? ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಸೋಮಾರಿ ಸಿದ್ದ ಪದ ಬಳಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬೆನ್ನಲ್ಲೇ ಪ್ರತಾಪ್ ಸಿಂಹ ಸ್ಪಷ್ಗನೆ ನೀಡಿದ್ದಾರೆ.
ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದರು. ನಾನು ಬಳಸಿದ್ದ ನಾಣ್ನುಡಿಯನ್ನು ನಿಮಗೆ ಬಳಸಿದ್ದು ಅಂತಾ ತಿರುಚುವ ಯತ್ನ ನಡೆದಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…