ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.
ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ ಒಡನಾಟ ಆಗಲೂ ಚೆನ್ನಾಗಿತ್ತು. ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಟ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ST ಗೆ ಸೇರಿಸಿದರು.
ಇದನ್ನು ಓದಿ : ಎಸ್‌ಟಿಗೆ ಕುರುಬ ಸಮುದಾಯ : ಸರ್ಕಾರಕ್ಕೆ ವರದಿ ಸಲ್ಲಿಸಿದ ಬುಡಕಟ್ಟು ಸಂಶೋಧನಾ ಸಂಸ್ಥೆ
ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು ಎಂದರು.
ಈಗ ಕುರುಬರನ್ನು ST ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟಪಡಿಸಿದರು.
ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ST ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಹೋಗಿದೆ. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದರು.
ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠವಾದ ರಾಮಾಯಣ ಮಹಾ ಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.
ಸಮುದಾಯಕ್ಕೆ ಬೇಕಾದ ಹಕ್ಕು, ಅವಕಾಶಗಳನ್ನು ಸಂಘಟನೆ, ಹೋರಾಟದ ಮೂಲಕ ಪಡೆದುಕೊಳ್ಳುವುದು ತಪ್ಪಲ್ಲ. ಹೋರಾಟ ಮಾಡಲೇಬೇಕು. ಇದನ್ನೇ ಅಂಬೇಡ್ಕರ್, ಬುದ್ದ, ಬಸವಣ್ಣ ಕೂಡ ಹೇಳಿದ್ದಾರೆ ಎಂದರು.
ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…