DK Shivakumar
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಸಾರ್ವಜನಿಕವಾಗಿ ನೇರ ಸಂದೇಶ ರವಾನಿಸಿದ್ದಾರೆ.
ಸಿಎಂ ಸ್ಥಾನ ಬದಲಾವಣೆ ಕುರಿತು ಡಿ.ಕೆ.ಶಿವಕುಮಾರ್ ಫೆ.26ಕ್ಕೆ ದಿಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದರು. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ಇಕ್ಬಾಲ್ ಹುಸೇಸ್ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯರು. ಎಲ್ಲಾ ಹುಸೇನ್‌ಗಳಿಗೂ ಹೇಳುತ್ತಿದ್ದೇನೆ, ನನ್ನ ಪರ ಮಾತನಾಡುತ್ತಿರುವವರು ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆಯದು. ಆಗ ನನಗೆ ಒಳ್ಳೆಯದಾಗುತ್ತದೆ’ ಎಂದು ಹೇಳಿದ್ದಾರೆ.
ಶಾಸಕ ಇಕ್ಬಾಲ್ ಹುಸೇನ್, ರವಿ ಗಣಿಗ, ಶಿವಗಂಗಾ ಬಸವರಾಜು, ಕುಣಿಗಲ್ ರಂಗನಾಥ್ ಅವರು ಬಾಯಿ ಮುಚ್ಚಿಕೊಂಡಿರಬೇಕು. ಅವರು ಮೌನವಾಗಿದ್ದರೆ ತಮಗೆ ಒಳ್ಳೆಯದಾಗುತ್ತದೆ ಎಂದು ಖಡಕ್ ಸಂದೇಶ ರವಾನಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…