ರಾಜ್ಯ

ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು: ಸಂಸದ ಬಸವರಾಜ ಬೊಮ್ಮಾಯಿ ಲೇವಡಿ

ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ ಹಣ ಕೊಡುವ ಸ್ಥಿತಿ ಬಂದಿದೆ. ರಾಜ್ಯದ ಜನರು ಕೊಡುವ ದುಡ್ಡಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ.

ಬಡವರು ಕುಡಿಯುವ ಮದ್ಯಕ್ಕೂ ತೆರಿಗೆ ಹಾಕಿದ್ದಾರೆ. ಸಾಮಾನ್ಯವಾಗಿ ವಿರೋಧ ಪಕ್ಷದವರು ಪತ್ರ ಬರೆಯುತ್ತಾರೆ. ಹಗರಣಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ವಿಷಯವಾರು ಹೋರಾಟ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಒಂದು ಶಕ್ತಿ ಇದ್ದಂತೆ. ಅವರು ಪ್ರವಾಸ ಮಾಡಿದಾಗಲೆಲ್ಲಾ ಒಂದು ಸ್ಪೂರ್ತಿ ಸಿಗುತ್ತೆ. ಈ ಬಾರಿ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರವಾಸ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

9 mins ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

58 mins ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

1 hour ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

1 hour ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

2 hours ago