ರಾಜ್ಯ

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ ವದಂತಿಗಳು ಮಾತ್ರ ಎಂದು ವಸತಿ ಸಚಿವ ಜಮೀರ್ ಅಹಮದ್‍ಖಾನ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನಗೆ ಏನು ಕಡಿಮೆ ಮಾಡಿದೆ ಎಂದು ನಾನು ಬೇರೆ ಪಕ್ಷಕ್ಕೆ ಹೋಗಬೇಕೆಂದು ಪ್ರಶ್ನಿಸಿದ್ದಾರೆ.

2017ರಲ್ಲಿ ತಾವು ಕಾಂಗ್ರೆಸ್‌ಗೆ ಬಂದಿದ್ದು 2018ರಲ್ಲಿ ಜೆಡಿಎಸ್‌-ಕಾಂಗ್ರೆಸ್ ಸಮಿಶ್ರ ಸರ್ಕಾರ ರಚನೆಯಾಯಿತು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದರು. ನನ್ನನ್ನು ಮಂತ್ರಿ ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಆದರೆ ನನ್ನನ್ನು ಸಚಿವನ್ನಾಗಿ ಮಾಡಿ, ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳು, ಹಜ್ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿ 5 ಖಾತೆಗಳನ್ನು ನೀಡಲಾಗಿತ್ತು. 2023ರಲ್ಲಿ ಮತ್ತೆ ನನ್ನನ್ನು ಮಂತ್ರಿ ಮಾಡಿ 4 ಖಾತೆಗಳನ್ನು ನೀಡಿದ್ದಾರೆ. ನಾನು ಇದನ್ನೆಲ್ಲಾ ಹೇಗೆ ಮರೆಯಲಿ ಎಂದು ಪ್ರಶ್ನಿಸಿದರು.

ಆರಂಭದಲ್ಲಿ ಜೆಡಿಎಸ್-ಬಿಜೆಪಿ ಸಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ನನ್ನನ್ನು ಮಂತ್ರಿ ಮಾಡಿ, ಹಜ್ ಮತ್ತು ವಕ್ಪ್ ಎಂಬ ಎರಡು ಖಾತೆಗಳನ್ನು ಮಾತ್ರ ನೀಡಿದ್ದರು. ಕಾಂಗ್ರೆಸ್ ಪಕ್ಷ ನನಗೆ ಏನನ್ನೂ ಕಡಿಮೆ ಮಾಡಿಲ್ಲ ಎಂದರು.

ಅಹಮದ್‍ಖಾನ್, ಥೋ…ಥೋ….ಥೋ… ಇದೆಲ್ಲಾ ಊಹಾಪೋಹ. ನಾನು ಆ ಪಕ್ಷವನ್ನು ಬಿಟ್ಟು ಬಂದಿದ್ದೇನೆ. ಮತ್ತೆ ಏಕೆ ಹೋಗಲಿ? ಕುಮಾರಸ್ವಾಮಿ ಅವರ ಜೊತೆ ರಹಸ್ಯ ಮಾತುಕತೆ ಮಾಡುವ ಅಗತ್ಯ ಏನಿದೆ ಎಂದು ತಾವೇ ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

22 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

22 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

22 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

23 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

23 hours ago