ಶಿವಮೊಗ್ಗ: ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣಕ್ಕಾಗಿ, ಬಿಜೆಪಿಯಲ್ಲಿ ತಮಗೆ ಅನ್ಯಾಯ ಆಗಿರುವವರು ಹಿಂದುತ್ವದಲ್ಲಿ ನಂಬಿಕೆ ಹೊಂದಿರುವವರು ಈ ಬಾರಿ ನನ್ನನ್ನು ಬೆಂಬಲಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಗೀತಾ ಶಿವಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಜಾತಿಯ ಆಧಾರದಲ್ಲಿ ಮತಯಾಚಿಸಿದ್ದಾರೆ. ಆದರೆ ಅವರು ಯಾವುದೇ ಷಡ್ಯಂತರ ನಡೆಸಿದರು ಈ ಬಾರಿ ಅಧಿಕ ಮತಗಳ ಅಂತರದಿಂದ ನಾನು ಗೆಲ್ಲಲ್ಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂ ಸಮಾಜವನ್ನು ಜಾತಿ ಹೆಸರಲ್ಲಿ ಒಡೆದು ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿರುವ ಮುಸಲ್ಮಾನರು ಐಕ್ಯತೆಯನ್ನು ಪ್ರದರ್ಶಿಸಿದ್ದಾರೆ. ಈ ಬಾರಿ ಮುಸ್ಲೀಂರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದರು.