ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಸಂಬಂಧ ಬಿಜೆಪಿ ನಡೆಸಿರುವ ಹುನ್ನಾರ ಮಾಡುತ್ತಿದೆ ಎಂಬ ಆರೋಪಕ್ಕೆ ಜಗದೀಶ್ ಶೆಟ್ಟರ್ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಯಾರು ಹಗರಣಗಳು ಸೇರಿದಂತೆ ತಪ್ಪು ಮಾಡಿದ್ದಾರೋ ಅವರ ರಾಜೀನಾಮೆ ಕೇಳುತ್ತಿದ್ದೇವೆ. ಇದರಲ್ಲಿ ಯಾವುದೇ ಹುನ್ನಾರವಿಲ್ಲ. ತಪ್ಪು, ಹಗರಣ ಮಾಡದೇ ಇರುವವರು ಇದಕ್ಕೆ ಹೆದರುವ ಅವಶ್ಯಕತೆ ಇರುವುದಿಲ್ಲ ಎಂದು ಟಾಂಗ್ ಕೊಟ್ಟರು.
ರಾಜ್ಯಪಾಲರಿಗೆ ಖಾಸಗಿ ದೂರು ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಹಗರಣದಲ್ಲಿ ಸಿಎಂ ಭಾಗಿಯಾಗಿರುವುದು ಕಂಡು ಬರುತ್ತದೆ. ರಾಜ್ಯಪಾಲರು ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 50:50 ಅನುಪಾತದಲ್ಲಿ ಸಿಎಂ ಅವರಿಗೆ ಮೂರು ಎಕರೆ ಜಮೀನು ಸಿಕ್ಕಿದ್ದರೇ ಅದನ್ನು ಯಾರು ಪ್ರಶ್ನೆ ಮಾಡುತ್ತಿರಲಿಲ್ಲ. ಆ ವೇಳೆ ಸಿದ್ದರಾಮಯ್ಯ ಡಿಸಿಎಂ ಆಗಿದ್ದು, ಅಧಿಕಾರ ದುರ್ಬಳಕೆಯಾಗಿದೆ. ಹಾಗಾಗಿ ಅವರು ಮುಂದಿನ ಕ್ರಮ ಎದುರಿಸಲಿದ್ದಾರೆ ಎಂದು ತಿಳಿಸಿದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್‌ನಲ್ಲಿ ಎರಡು ಬಣಗಳಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ವರಿಷ್ಠರು ಸಮಸ್ಯೆಗಳನ್ನು ಬಗಹರಿಸುವ ಕೆಲಸ ಮಾಡಲಿದ್ದಾರೆ ಎಂದಷ್ಟೆ ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…